ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ
ಹನೂರು, ಬುಧವಾರ: ತಾಲ್ಲೂಕಿನ ಪ್ರಸಿದ್ಧ ತೀರ್ಥಕ್ಷೇತ್ರವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 27 ದಿನಗಳ ಅವಧಿಯಲ್ಲಿ ಭಕ್ತರು ಹರಕೆಯ ರೂಪದಲ್ಲಿ ಒಟ್ಟು ₹2,14,40,939 ನಗದು ದೇಣಿಗೆ ಸಲ್ಲಿಸಿದ್ದಾರೆ. ಜೊತೆಗೆ 45 ಗ್ರಾಂ ಚಿನ್ನ ಮತ್ತು 2 ಕೆಜಿ 320 ಗ್ರಾಂ ಬೆಳ್ಳಿ ಪದಾರ್ಥಗಳು ಕೂಡಾ ಹುಂಡಿಯಲ್ಲಿ ದೊರೆತಿವೆ.

ಹುಂಡಿ ಎಣಿಕೆ ವೇಳೆ ಚಲಾವಣೆಯಲ್ಲಿ ಇಲ್ಲದ ₹2000 ಮುಖಬೆಲೆಯ 3 ನೋಟುಗಳು ಹಾಗೂ 9 ವಿದೇಶಿ ನೋಟುಗಳು ಪತ್ತೆಯಾಗಿವೆ.
ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ, ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಿತು.
ಸರ್ಕಾರಿ ರಜಾದಿನಗಳು, ಅಮಾವಾಸ್ಯೆ, ಅಯ್ಯಪ್ಪ ಭಕ್ತರು ಹಾಗೂ ಓಂ ಶಕ್ತಿ ಭಕ್ತರ ಹೆಚ್ಚಿನ ಆಗಮನ, ಜೊತೆಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣ ಸೌಲಭ್ಯದಿಂದ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಹರಕೆಗಳ ರೂಪದಲ್ಲಿ ದೇಣಿಗೆ ಪ್ರಮಾಣವೂ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುಂಡಿ ಎಣಿಕೆ ವೇಳೆ ಚಲಾವಣೆಯಲ್ಲಿ ಇಲ್ಲದ ₹2000 ಮುಖಬೆಲೆಯ 3 ನೋಟುಗಳು ಹಾಗೂ 9 ವಿದೇಶಿ ನೋಟುಗಳು ಪತ್ತೆಯಾಗಿವೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಭಾಗ್ಯಮ್ಮ ಮಹದೇವಪ್ಪ, ಲೆಕ್ಕಾಧಿಕಾರಿ ಗುರುಮಲ್ಲಯ್ಯ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಪಾಲ್ಗೊಂಡಿದ್ದರು.
ಭಕ್ತರ ಭಕ್ತಿಭಾವ ಮತ್ತು ಕ್ಷೇತ್ರದ ಮೇಲಿನ ನಂಬಿಕೆಗೆ ಈ ಹುಂಡಿ ಸಂಗ್ರಹವು ಮತ್ತೊಮ್ಮೆ ಸಾಕ್ಷಿಯಾಗಿದೆ.

ಆಫ್ ಲೈನ್ ಹಾಗೂ ಆನ್ಲೈನ್ ಸಂಗೀತ ಕಲಿಯೋ ಆಸಕ್ತಿ ಇರುವವರು ಕೂಡಲೇ ಸಂಪರ್ಕಿಸಿ 9731627466/8310382981


