ರಾಜ್ಯದ ಪ್ರಸ್ತುತ ಜನಸಂಖ್ಯೆಯ ಅಂಕಿ ಅಂಶಗಳನ್ನು ಗಮನಿಸಿದರೆ ಪರಿಶಿಷ್ಟ ಜಾತಿಯವರು ಶೇ17.1 ರೆಷ್ಟಿದ್ದರೆ ಪರಿಶಿಷ್ಟ ಪಂಗಡದವರು ಶೇ6.95 ರಷ್ಟಿದ್ದಾರೆ ಸಂವಿಧಾನದ ಆಶಯದಂತೆ ಈ ವರ್ಗಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳು ದೊರೆಯಬೇಕು ಈಗಾಗಲೇ ಲೋಕಸಭೆ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ನೀಡಲಾಗುತ್ತಿದೆ ಅಲ್ಲದೆ ಮತ್ತು ಕಾನೂನಿನಡಿ ಪ್ರತಿ ವರ್ಷ ರಾಜ್ಯದ ಆಯವ್ಯದಲ್ಲಿ ಅನುದಾನವನ್ನು ಹಂಚಿಕೆ ಮಾಡಲಾಗುತ್ತಿದೆ
ಈಗಿರುವಾಗ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಾತ್ರ ಹಳೆಯ ಪದ್ಧತಿಯಲ್ಲಿ ಮುಂದುವರಿಸುವುದು ಸರಿ ಎಂದು ಉಗ್ರಪ್ಪ ಪ್ರಶ್ನಿಸಿದರು ಕರ್ನಾಟಕದಲ್ಲಿ ದಶಕಗಳಿಂದಲೂ ಎಸ್ ಸಿ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಮತ್ತು ಎಸ್ಟಿ ಮೀಸಲಾತಿಯನ್ನು 3 ರಿಂದ 7 ಕೆ ಹೆಚ್ಚಿಸಬೇಕೆಂದು ಹೋರಾಟ ನಡೆಯುತ್ತಲೇ ಇದೆ ಈ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ಕೂಡ ಎಸ್ ಸಿ ಎಸ್ ಟಿ ಮೀಸಲಾತಿ ರಾಜ್ಯ ನಾಯಕ ವಿದ್ಯಾರ್ಥಿ ಸಂಘ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಸರ್ಕಾರಕ್ಕೆ ಈ ಹಿಂದೆ ನಿರ್ದೇಶನ ನೀಡಿತು
ಈ ಕುರಿತು ಆಳವಾದ ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು ಈ ಸಮಿತಿಯ ದತ್ತಾಂಶಗಳು ಮೀಸಲಾತಿ ಹೆಚ್ಚಳದ ಅಗತ್ಯತೆಯನ್ನು ಸ್ಪಷ್ಟಪಡಿಸಿದೆ ಸಾಮಾಜಿಕ ನ್ಯಾಯದ ಮೇಲೆ ಅಪಾರ ನಂಬಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ತಕ್ಷಣ ಹಸ್ತಕ್ಷೇಪ ಮಾಡಬೇಕೆಂದು ಉಗ್ರಪ್ಪ ಒತ್ತಾಯಿಸಿದ್ದಾರೆ
ಮೊದಲು ಅಂತ ವಾಗಿ ಮುಖ್ಯಮಂತ್ರಿಗಳು ಎಸ್ ಸಿ ಎಸ್ ಟಿ ಮೀಸಲಾತಿ ಕೂಡಲೇ ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು ಮತ್ತು ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರನ್ನು ಒಳಗೊಂಡ ನಿಯಗವನ್ನು ಪ್ರಧಾನ ಮಂತ್ರಿಗಳ ಬಳಿಗೆ ಕರದೂಯ್ಯಬೇಕು ನ್ಯಾಯಾಲಯದಲ್ಲಿರುವ ತಡೆಯಜ್ಞೆಯನ್ನು ತೆರವುಗೊಳಿಸಲು ಸಮರ್ಥ ವಕೀಲರನ್ನು ನೇಮಿಸಿ ಕಾನೂನು ಹೋರಾಟ ನಡೆಸಬೇಕು
ಒಂದು ವೇಳೆ ಉಚ್ಚನ್ಯಾಯಾಲಯದಲ್ಲಿ ತಡೆಯಾಜ್ಞೆ ತೆರವಾಗದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಅರ್ಜಿಯನ್ನು ದಾಖಲಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು ರಾಜ್ಯ ಸರ್ಕಾರವು ಈ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಂವಿಧಾನದ 9ನೇ ಶೆಡ್ಯೂಲಿಗೆ ಸೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ ಸಂಸದರು ಶಾಸಕರು ಮತ್ತು ಮಂತ್ರಿಗಳು ಒಗ್ಗಟ್ಟಾಗಿ ಪ್ರಧಾನಮಂತ್ರಿಗಳೊಂದಿಗೆ ಚರ್ಚಿಸಿ,
ಈ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಸಂವಿಧಾನ ರಕ್ಷಣೆ ಸಿಗದಿದ್ದರೆ ಈ ಮೀಸಲಾತಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳವು ಕೇವಲ ಕಾಗದದ ಮೇಲೆ ಉಳಿಯುವ ಸಾಧ್ಯತೆ ಇದೆ ಒಂದು ವೇಳೆ ಸರ್ಕಾರಗಳು ಈ ನಿಟ್ಟಿನಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಮುಂಬರುವ ದಿನಗಳಲ್ಲಿ ರಾಜ್ಯದ ಸ್ವರೂಪದ ಪ್ರತಿಭಟನೆಯ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಮಾಜಿ ಸಂಸದ ಉಗ್ರಪ್ಪ ಎಚ್ಚರಿಕೆ ನೀಡಿದರು






