ಬೆಂಗಳೂರು : ಮೇ 24 ; ಚಂದ್ರಲೇಔಟ್‌ನಲ್ಲಿರುವ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಂಸ್ಥೆಯ ಪದಾಧಿಕಾರಿಗಳ ಸಭೆ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ವಿವಿಧ ಸಂಘಟನೆ ಸಂಬಂಧಿತ ವಿಚಾರಗಳು ಹಾಗೂ ಮಾನವ ಹಕ್ಕುಗಳ ರಕ್ಷಣೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಿಎಂ ಗಣೇಶ್ ಗೌಡ ಅವರ ನೇತೃತ್ವದಲ್ಲಿ ಸುಭಾಷ ಬಸಪ್ಪ ಮುಕಿಹಾಳ ನಿವೃತ ಕೃಷಿ ಅಧಿಕಾರಿ (ಬಿಎಸ್ಸಿ ಕೃಷಿ) ಅವರನ್ನು ಗುಲ್ಬರ್ಗ ಜಿಲ್ಲಾ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಲಾಯಿತು.
ನೂತನ ಜವಾಬ್ದಾರಿ ಸ್ವೀಕರಿಸಿದ ಬಳಿಕ ಮಾತನಾಡಿದ ಸುಭಾಷ ಬಸಪ್ಪ ಮುಕಿಹಾಳ ಅವರು, ಸಂಸ್ಥೆಯ ಉದ್ದೇಶಗಳು ಮತ್ತು ಮಾನವ ಹಕ್ಕುಗಳ ಸಂರಕ್ಷಣೆಗೆ ತಾವು ಸಮರ್ಪಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ನೂತನ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.






