ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 3) ಸಂಜೆ 4:05ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸರಳವಾಗಿ ಆಯೋಜಿಸಲಾಗಿರುವ ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ 11 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಮೊದಲ ಹಂತದ ಸಚಿವರ ಪಟ್ಟಿ
ಯತೀಂದ್ರ ಸಿದ್ದರಾಮಯ್ಯ
ಜಿ. ಪರಮೇಶ್ವರ್
ಕೆ.ಎಚ್. ಮುನಿಯಪ್ಪ
ಯು.ಟಿ. ಖಾದರ್
ಕೆ.ಜೆ. ಜಾರ್ಜ್
ಕೃಷ್ಣ ಬೈರೇಗೌಡ
ಎಂ.ಬಿ. ಪಾಟೀಲ್
ಪ್ರಿಯಾಂಕ್ ಖರ್ಗೆ
ಸತೀಶ್ ಜಾರಕಿಹೊಳಿ
ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್
ಗಣ್ಯರ ಉಪಸ್ಥಿತಿ
ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಸರ್ವಧರ್ಮ ಗುರುಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಮಾಣವಚನ ಸಮಾರಂಭವನ್ನು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ಹೊಸ ಸರ್ಕಾರದ ಆಡಳಿತಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.






