ಬೆಂಗಳೂರು, ಜೂನ್ 08: ಸಿವಿ ರಾಮನಗರ ಕ್ಷೇತ್ರದ ಕಾಕ್ಸ್ ಟೌನ್ ದೊಡ್ಡಕುಂಟೆಯಲ್ಲಿ ಚಿನ್ನಸವಾರಿ ಫೌಂಡೇಶನ್ ವತಿಯಿಂದ ಭಾನುವಾರದಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ 75 ವಿದ್ಯಾರ್ಥಿಗಳಿಗೆ ಟ್ಯಾಬ್ಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಸಿ.ಎಸ್. ಫ್ರಾನ್ಸಿಸ್ ಬೆನಿಟೊ ಚಿನ್ನಸವಾರಿ ಅವರು, ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದು ಸಂತಸದ ವಿಷಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರಿಂದ ಅವರ ಮುಂದಿನ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಜವಾಬ್ದಾರಿ ದೊರೆಯುತ್ತದೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಗಳನ್ನು ವಿತರಿಸಿ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಮುಖರಾದ ಎಸ್. ಶಿವ.ಎಲ್, ಸುಧಾಕರ್ ಎನ್,ರಾಜೇಶ್, ಸಂದೀಪ್, ವಿಕ್ಕಿ, ಗಜೇಂದ್ರ, ಅನಿತಾ,ರಾಧಾ, ಪ್ರದೀಪ್, ನರೇಶ್, ಶಶಿ ಹಾಗೂ ಪ್ರವೀಣ್ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರು ಚಿನ್ನಸವಾರಿ ಫೌಂಡೇಶನ್ನ ಈ ಸಾಮಾಜಿಕ ಸೇವಾ ಕಾರ್ಯವನ್ನು ಶ್ಲಾಘಿಸಿ, ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು.






