ಗುಡಿಬಂಡೆ ಜೂನ್ 12 ರಂದು ವರ್ಲಕೊಂಡ ಸರ್ಕಾರಿ ಪ್ರೌಢಶಾಲೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಸಾಮಾಜಿಕ ಅರಣ್ಯ ಶಿಕ್ಷಣ ಇಲಾಖೆ ಕಾರ್ಮಿಕ ಇಲಾಖೆ ಹಾಗೂ ವರ್ಲಕೊಂಡ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸದರಿ ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಪ್ರೇಮ ಕುಮಾರ್ ರವರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಮತ್ತು ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು ವಕೀಲರ ಸಂಘದ ಅಧ್ಯಕ್ಷರಾದ ಅಶ್ವತ್ಥ ರೆಡ್ಡಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಪ್ಯಾನಲ್ ವಕೀಲರಾದ ಪವಿತ್ರ ಬಿ ರವರು ಸಂಕ್ಷಿಪ್ತ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ನಾಗಮಣಿ ವಲಯ ಅರಣ್ಯ ಅಧಿಕಾರಿ ಪೀರಸಾಹೇಬ್ ಅ.ನದಾಪ್ ವಕೀಲರಾದ ನಂದೀಶ್ವರ ರೆಡ್ಡಿ ಕ್ಯಾನಲ್ ವಕೀಲರಾದ ನರೇಂದ್ರ ಪಿಡಿಒ ಸತ್ಯಪ್ರಸಾದ್ ಶಿಕ್ಷೆ ಇಲಾಖೆ ಟಿ ಪಿ ಓ ಹನುಮಂತರಾಯಪ್ಪ ಮುಖ್ಯ ಶಿಕ್ಷಕರಾದ ನಲಿನಾಕ್ಷಿ ಸಹಶಿಕ್ಷಕರು ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು






