ಬೆಂಗಳೂರು: ಆ.15: ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಹಾಸ್ಪಿಟಲ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಧ್ವಜಾರೋಹಣದೊಂದಿಗೆ ಆರಂಭಗೊಂಡು, ನಂತರ ರಾಷ್ಟ್ರಗೀತೆಯನ್ನು ಹಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಕೀಬ್, ದೇಶದ ಅಭಿವೃದ್ಧಿಯಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಹಾಗೂ ಮಾನವೀಯ ಆರೋಗ್ಯ ಸೇವೆ ದೊರೆಯುವಂತಾಗಬೇಕು. ಆರೋಗ್ಯವಂತ ಸಮಾಜವೇ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಬುನಾದಿಯಾಗಿದೆ ಎಂದು ಹೇಳಿದರು.
ಮೌಲಾನಾ ಅಬ್ದುರ್ ರವೂಫ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಸಕೀಬ್ ಅವರು ಕನ್ನಡದಲ್ಲಿ ಹಾಗೂ ಶ್ರೀ ಜಾಫರ್ ಅವರು ಉರ್ದು ಭಾಷೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಜೊತೆಗೆ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಕುರಿತು ಸಂದೇಶ ನೀಡಿದರು.

ಶಿಫಾ ಹಾಸ್ಪಿಟಲ್‌ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮುಷ್ತಾಕ್ ಅಹ್ಮದ್ ಅವರು ಮಾತನಾಡಿ, ಆರೋಗ್ಯ ಸೇವೆಯು ಕೇವಲ ಚಿಕಿತ್ಸೆ ನೀಡುವುದಕ್ಕೆ ಸೀಮಿತವಾಗದೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸಮಾಜದ ಆರೋಗ್ಯವನ್ನು ಉತ್ತಮಪಡಿಸುವುದೂ ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಯ ವೈದ್ಯರು, ನರ್ಸ್‌ಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ದೇಶಭಕ್ತಿ, ಆರೋಗ್ಯ ಜಾಗೃತಿ ಹಾಗೂ ಸಾಮಾಜಿಕ ಸೇವೆಯ ಸಂದೇಶದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.






