ಬೆಂಗಳೂರು, ಆ.16: ನಗರದ ಚಂದನ ಬಡಾವಣೆ, ಚಂದನ ಸರ್ಕಲ್, ಸುಂಕದಕಟ್ಟೆ ಪ್ರದೇಶದಲ್ಲಿ ಆಗಸ್ಟ್ 15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಬಿಸಿಎನ್ ಗ್ರೂಪ್ಸ್ನ ರೇಖಾ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ತಂಡದ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಪ್ರೇಮ್ ಚಂದ್ರು, ನಾಗಣ್ಣ, ಚಂದ್ರಶೇಖರ್, ಹನುಮಂತರಾಯಪ್ಪ, ಬಾಬಣ್ಣ, ಅಶೋಕ್, ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ಸುಂಕದಕಟ್ಟೆಯ ಅರೆ ರಂಗನಾಥ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಬಸಪ್ಪ ಬಿ,ಸಹ ಶಿಕ್ಷಕರಾದ ಲಿಂಗರಾಜು, ದೊಡ್ಡಸ್ವಾಮಿ ಹಾಗೂ ಪನೇಂದ್ರ ಅವರ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೋಹನ್ ಆಡಿಟರ್ ಅವರು ಉಚಿತ ಪುಸ್ತಕ ಸಾಮಗ್ರಿಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರುವ ಜೊತೆಗೆ, ವಿದ್ಯಾರ್ಥಿಗಳ ಶಿಕ್ಷಣ ಮತ್ತು ಭವಿಷ್ಯದ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ ಎಂಬ ಸಂದೇಶವನ್ನು ನೀಡಲಾಯಿತು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.






