ಸಿರಾ: ತಾಲ್ಲೂಕಿನ ಹುಣಸೇಹಳ್ಳಿ ಗ್ರಾಮದ ಮಸೀದಿ-ಎ-ಕುಬಾದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮದರಸಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ, ನೆರೆದಿದ್ದವರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಮೀರ್ ಖಾನ್ ಸಾಹೇಬ್, ಹಾಫಿಜ್ ಹಾಶಿಂ ಖಾನ್, ಮೌಲಾನಾ ನದೀಮ್ ಸಾಹೇಬ್, ಇಮಾಮ್ ಹಾಫಿಜ್ ಅಬ್ದುಲ್ ತಾಲಿಬ್, ಖಾಸಿಂ ಸಾಹೇಬ್ ಹಾಗೂ ಇಮ್ರಾನ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ, ಶಾಂತಿ, ಸಹೋದರತ್ವ ಹಾಗೂ ಸೌಹಾರ್ದತೆ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ದೇಶದ ಐಕ್ಯತೆ ಮತ್ತು ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಲಾಯಿತು. ದೇಶದಲ್ಲಿ ಶಾಂತಿ, ಪ್ರಗತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮವು ದೇಶಭಕ್ತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.






