ಬೆಂಗಳೂರು, ಸೆ.5: ನಗರದ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಕಚೇರಿಯಲ್ಲಿ ನಾಯಕ ನಟ ಸೂಚನ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಆತ್ಮೀಯವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಖಳನಾಯಕನ ಪಾತ್ರದಲ್ಲಿ ಗುರುತಿಸಿಕೊಂಡಿರುವ ಪ್ರಸಿದ್ಧ ನಾಗ್, ಕೃಷ್ಣ ಗುರೂಜಿ, ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯಾಧ್ಯಕ್ಷ ಸಿಎಂ ಗಣೇಶ್ ಗೌಡ,ತಿರುಮಲ ಆನಂದ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ಸೂಚನ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣ ಗುರೂಜಿ ಸುಚನ್ ಶೆಟ್ಟಿ ಅವರ ಕಲಾ ಪಯಣ ಹಾಗೂ ಮುಂದಿನ ದಿನಗಳ ಯಶಸ್ಸಿಗೆ ಶುಭ ಹಾರೈಸಿದರು. ಇದೆ ಸಂದರ್ಭದಲ್ಲಿ ನಿರ್ಮಾಪಕ ಮಹೇಂದ್ರ ಶೆಟ್ಟಿ ಅವರಿಗೆ ಕೃತಜ್ಞತೆ ತಿಳಿಸಿದರು.
ಸಿನಿಮಾ ಕ್ಷೇತ್ರದಲ್ಲಿ ಸುಚನ್ ಶೆಟ್ಟಿ ಅವರು ಇನ್ನಷ್ಟು ಉತ್ತಮ ಅವಕಾಶಗಳನ್ನು ಪಡೆದು, ತಮ್ಮ ಪ್ರತಿಭೆಯ ಮೂಲಕ ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಲಿ ಎಂದು ಕೃಷ್ಣ ಗುರೂಜಿ ಹಾರೈಸಿದರು. ಅಭಿಮಾನಿಗಳು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿ ಹುಟ್ಟುಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.






