ಗುಡಿಬಂಡೆ : ಜ29 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷರಾದ ಜಿಎಸ್ ನಾಗರಾಜ್ ಮಾತನಾಡಿ ಜನವರಿ 31ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಮುಖ್ಯಬೀದಿಯಲ್ಲಿ ಭವ್ಯ ಶೋಭ ಯಾತ್ರೆ ನಡೆಯಲಿದ್ದು ಈ ಶೋಭ ಯಾತ್ರೆಯಲ್ಲಿ ಕಲಾತಂಡ ಗಳೊಂದಿಗೆ ಶೋಭಯಾತ್ರೆ ನಡೆಸಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ ಈ ಕಾರ್ಯಕ್ರಮಕ್ಕೆ ಶ್ರೀ ನರವತ್ ಮಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ವಿಶ್ವ ಹಿಂದೂ ಪರಿಷತ್ತಿನ ಮುಖಂಡರು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಸಮಸ್ತ ಹಿಂದೂ ಸಮಾಜದ ಎಲ್ಲಾ ಮುಖಂಡರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಎಸ್ ನಾಗರಾಜ್ ಮನವಿ ಮಾಡಿದರು ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷರಾದ ದ್ವಾರಕಾನಾಥ್ ನಾಯ್ಡು ಮಾತನಾಡಿ ಹಿಂದೂ ಸಮಾಜೋತ್ಸವ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ ಇದು ಸಂಪೂರ್ಣ ಪಕ್ಷಾತೀತ ಕಾರ್ಯಕ್ರಮವಾಗಿದ್ದು ಜಾತಿ ಭೇದ ಮರೆತು ಎಲ್ಲಾ ಹಿಂದೂ ಬಾಂಧವರು ಒಗ್ಗಟ್ಟಾಗಿ ಭಾಗವಹಿಸುವ ಮೂಲಕ ಹಿಂದೂ ಸಮಾಜೋತ್ಸವ ಏಕತೆಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಮಾತನಾಡಿ ಹಿಂದೂ ನಾವೆಲ್ಲ ಒಂದೇ ಎಂಬ ಘೋಷಣೆಯೊಂದಿಗೆ ಈ ಸಮಾಜೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ನೆರೆಯ ದೇಶಗಳಲ್ಲಿನ ಹಿಂದುಗಳ ಸ್ಥಿತಿಗತಿಗಳನ್ನು ಗಮನಿಸಿದರೆ ಈಗಲೇ ಸಂಘಟಿತರಾಗುವುದು ಅಗತ್ಯವಾಗಿದೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳನ್ನು ಎದುರಿಸಲು ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ಮಂಜುನಾಥ್ ರಾಜಗೋಪಾಲ್ ರಾಜಣ್ಣ ಉಪಸ್ಥಿತರಿದ್ದರು.






