ಬೆಂಗಳೂರು: ಅಬಕಾರಿ ಸಚಿವರ ಮೇಲೆ ನೇರ ಆರೋಪ ಬಂದಿದೆ. ಭ್ರಷ್ಟಾಚಾರದ ಆರೋಪ ಬಂದ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಅವರ ಬೆನ್ನಿಗೆ ನಿಂತಿದ್ದನ್ನು ನೋಡಿದರೆ ಅಬಕಾರಿ ಇಲಾಖೆಯ ಐದಾರು ಸಾವಿರ ಕೋಟಿ ಭ್ರಷ್ಟಾಚಾರದ ಹಗರಣದಲ್ಲಿ ಇಲ್ಲಿಗೆ ಪಾಲು ಹೋಗಿದ್ದಲ್ಲದೇ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಪಾಲು ಹೋಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯನವರ ಸರಕಾರ ಇಂಥ ಭಂಡತನ ಮಾಡುತ್ತಿದೆ. ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಮತ್ತೊಮ್ಮೆ ಆಗ್ರಹಿಸುವುದಾಗಿ ತಿಳಿಸಿದರು. ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ- ಜೆಡಿಎಸ್ ಇವತ್ತು ಅಹೋರಾತ್ರಿ ಧರಣಿ ನಡೆಸಲಿವೆ ಎಂದು ಅವರು ಪ್ರಕಟಿಸಿದರು.





