ಬೆಂಗಳೂರು, ಆಗಸ್ಟ್ 14: ಮಲ್ಲೇಶ್ವರಂನಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯ ಕಚೇರಿಯಲ್ಲಿ 13ರಂದು ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಡಾ. ಜಯನ್.ಎಸ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಶಿವರಾಮೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಜಯನ್.ಎಸ್ ಅವರಿಗೆ ನೂತನ ಜವಾಬ್ದಾರಿ ನೀಡಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಅಧ್ಯಕ್ಷರಾದ ಶಂಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಗೌಡ, ಸಮರಸೇನೆಯ ರಾಜ್ಯಾಧ್ಯಕ್ಷರಾದ ಜಗದೀಶ್ ಗೌಡ ಹಾಗೂ ಯುವ ಘಟಕದ ಅಧ್ಯಕ್ಷರಾದ ಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನವಾಗಿ ಆಯ್ಕೆಯಾದ ಡಾ. ಜಯನ್.ಎಸ್ ಅವರಿಗೆ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ಸಂಘಟನೆಯ ಆಶಯಗಳು ಹಾಗೂ ಕನ್ನಡ ನಾಡು-ನುಡಿಯ ಹಿತಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಹತ್ವದ ಹೆಜ್ಜೆಯಾಗಿದೆ ಎಂದು ಹೆಚ್. ಶಿವರಾಮೇಗೌಡ ಅವರು ಹೇಳಿದರು.






