ಗುಡಿಬಂಡೆ ಜ 30 ರಂದು ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ , ಯೋಜನೆಯ ಬದಲಾಗಿ ಜಾರಿಗೆ ತಂದಿರುವ ವಿಕಸಿತ ಭಾರತ ಗ್ರಾಮೀಣ ರೋಜಗಾರ್ ಅಜೀವಿಕ ಮಿಷನ್ ( ವಿಬಿ – ಗ್ರಾಮ್ ಜಿ ) ಕಾಯಿದೆಯು ಗ್ರಾಮೀಣ ಬಡವರ ಕೃಷಿ ಕೂಲಿ ಕಾರ್ಮಿಕರು ಹಾಗೂ ಸಣ್ಣ ಮಾಧ್ಯಮ ರೈತರಿಗೆ ಮರಣ ಶಾಸನವಾಗಿದ್ದು ಈ ಕಾಯ್ದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಗುಡಿಬಂಡೆ ತಾಲೂಕು ಸಮಿತಿ ವತಿಯಿಂದ ಇಂದು ಪಟ್ಟಣದ ಅಂಬೇಡ್ಕರ್ ಪುತ್ತಳಿ ಬಳಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನಿ ವೆಂಕಟಪ್ಪ ಎಂ ಪಿ ರವರು ಮಾತನಾಡಿ ಗ್ರಾಮೀಣ ಬಡವರಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಬಡವರ ವಿರೋಧಿ ವಿಬಿ – ಗ್ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವುದು ಖಂಡನೀಯ ಎಂದು ಈ ಹೊಸ ಕಾಯ್ದೆಯನ್ನು ವಾಪಸ್ ಪಡೆದು ಉದ್ಯೋಗ ಖಾತ್ರಿ ಯೋಜನೆಯನ್ನು ಬಲಪಡಿಸಿ ಮುಂದುವರಿಸಬೇಕೆಂದು ಆಗ್ರಹಿಸಿದರು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಸದಸ್ಯರಾದ ಶ್ರೀನಿವಾಸ್ ರವರು ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ವಲಸೆ ಸಮಸ್ಯೆ ತಪ್ಪಿಸಲು ಎರಡು ಪಕ್ಷಗಳು ಹಾಗೂ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಕೈ ಬಿಟ್ಟು ಹೊಸ ಕಾಯ್ದೆ ಜಾರಿಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು ವಿಬಿ- ಗ್ರಾಮ್ ಜಿ ಕಾಯ್ದೆಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು ಈ ಉಪವಾಸ ಸತ್ಯಾಗ್ರಹದಲ್ಲಿ ಸಿಪಿಐಎಂ ಮುಖಂಡ ಜಯ ರಾಮ ರೆಡ್ಡಿ ತಾಲೂಕು ಕಾರ್ಯದರ್ಶಿ ವೆಂಕಟರಾಜು ಆದಿ ನಾರಾಯಣ ಸ್ವಾಮಿ ಲಕ್ಷ್ಮಿ ನಾರಾಯಣ ಸೇರಿದಂತೆ ಕೂಲಿ ಕಾರ್ಮಿಕರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.






