ಬೆಂಗಳೂರು : ಜೂನ್ 30 ; ಈಬಾದ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಿಯು ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಉಚಿತ ಕರಿಯರ್ & ಲೀಡರ್‌ಶಿಪ್ ವರ್ಕ್‌ಶಾಪ್ ಅನ್ನು ಜುಲೈ 4ರಂದು ಆಯೋಜಿಸಲಾಗಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಆರಂಭವಾಗಲಿದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ವೃತ್ತಿ ಮಾರ್ಗದರ್ಶನ ನೀಡುವುದು ಹಾಗೂ ಭವಿಷ್ಯದ ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶಗಳ ಕುರಿತು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.ಈಬಾದ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಅತೀಕ್ ಅಹಮದ್ ಅವರು ಮಾತನಾಡಿ, “ಪಿಯು ಮತ್ತು ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾರ್ಗದರ್ಶನ ನೀಡಲಾಗುತ್ತದೆ” ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಇಸ್ಮಾಯಿಲ್ ಖಾನ್ ಹಾಗೂ ಮೌಲಾನಾ ಸಿರಾಜ್ ಅಹಮದ್ ಉಪಸ್ಥಿತರಿದ್ದರು.






