ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜನಾಬ್ ಕೆ. ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಭವ್ಯ ಇಫ್ತಾರ್ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಮಝಾನ್ ಮಾಸದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಲವಾರು ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಸತಿ ಹಾಗೂ ವಕ್ಫ್ ಸಚಿವರಾದ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮ್ಮದ್, ವಿಧಾನ ಪರಿಷತ್ ಸದಸ್ಯೆ ಬಲ್ಮೀಸ್ ಭಾನು, ಶಾಸಕರಾದ ಶ್ರೀನಿವಾಸ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್, ಸದಸ್ಯರಾದ ಸಿರಾಜ್ ಅಹಮ್ಮದ್, ಇರ್ಷಾದ್ ಬಾಯ್ ಸೇರಿದಂತೆ ಅಲ್ಪಸಂಖ್ಯಾತರ ಘಟಕದ ಹಲವು ನಾಯಕರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಹಾಗೂ ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಾಜಿ ಡಾ. ಶೇಖ್ ವಹೀದ್ ದಾವೂದ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಮಾಜ ಸೇವೆ ಹಾಗೂ ಸಮುದಾಯದ ಅಭಿವೃದ್ಧಿಗೆ ನೀಡಿದ ಅವರ ಕೊಡುಗೆಯನ್ನು ಗಣ್ಯರು ಪ್ರಶಂಸಿಸಿದರು.
ಕಾರ್ಯಕ್ರಮವು ಅಲ್ಪಸಂಖ್ಯಾತ ಸಮುದಾಯದ ಐಕ್ಯತೆ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವಂತೆಯೂ, ನಾಯಕರ ಹಾಗೂ ಕಾರ್ಯಕರ್ತರ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನಡೆಯಿತು.
