ಗುಡಿಬಂಡೆ,ಮಾ3 ; ರಂದು ಪುರಾತನ ಇತಿಹಾಸ ಹಾಗೂ ಭವ್ಯ ಸಂಪ್ರದಾಯವನ್ನು ಹೊಂದಿರುವ ಬಲಿಗೆ ಸಮುದಾಯದ ಪ್ರಗತಿಗಾಗಿ ಪ್ರತಿಯೊಬ್ಬರು ರಾಜಕೀಯ ಭಿನ್ನಾಭಿಪ್ರಾಯ ಮತ್ತು ವೈಯಕ್ತಿಕ ದ್ವೇಷಗಳನ್ನು ಬದಿಗಿಡಬೇಕು ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮುದಾಯವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸಲು ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್ ಸಂಪಂಗಿ ತಿಳಿಸಿದರು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಯೋಗಿ ನಾರಾಯಣ ಯತೀಂದ್ರ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಲಿಜ ಸಮುದಾಯವು ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಹಾಗೂ ಅನೇಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ದುರುದ್ದೇಶ ಹಾಗೂ ಒಳಜಗಳಗಳಿಂದಾಗಿ ಸಮುದಾಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಹೀಗಾಗಿ ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳಿಗೆಗಾಗಿ ಶ್ರಮಿಸುವುದು ಈಗ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು ತಮ್ಮ ರಾಜಕೀಯ ಜೀವನದ ಹಾದಿಯನ್ನು ಸ್ಮರಿಸಿದ ಅವರು ಈ ಕ್ಷೇತ್ರದ ಜನತೆ ನನ್ನನ್ನು ಎರಡು ಬಾರಿ ಶಾಸಕರನ್ನಾಗಿ ಮಾಡಿ ಸೇವೆಗೆ ಅವಕಾಶ ನೀಡಿದ್ದನ್ನು ಎಂದಿಗೂ ಮರೆಯಲು ಸಾಧ್ಯ ವಿಲ್ಲ ಎಂದರು, ತಾನು ಶಾಸಕನಾಗಿದ್ದ ಅವಧಿಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿದ್ದರು ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಏರಿ ಅನುದಾನ ತರುವ ಮೂಲಕ ಪರಗೋಡು ಬಲಿ ಡ್ಯಾಮ್ ನಿರ್ಮಿಸಿ ಈ ಭಾಗದ ಫ್ಲೋರೈಡ್ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು ಈಗ ಉಗ್ರಾಣ ನಿಗಮದ ಅಧ್ಯಕ್ಷನಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಶ್ರಮಿಸುವುದಾಗಿ ಬರವಸೆ ನೀಡಿದರು ಇದೇ ಸಂದರ್ಭದಲ್ಲಿ ಈ ಭಾಗದ ಜನರ ಬಹುದಿನಗಳ ಕನಸಾದ ಬೆಂಗಳೂರು ಚಿಕ್ಕಬಳ್ಳಾಪುರ ಬಾಗೇಪಲ್ಲಿ ರೈಲ್ವೆ ಯೋಜನೆಯ ಕುರಿತು ಪ್ರಸ್ತಾಪಿಸಿದ ಸಂಪಂಗಿ ರವರು ಈ ಹಿಂದೆ ವೀರಪ್ಪ ಮೊಯ್ಲಿ ಅವರ ಕೇಂದ್ರ ಸಚಿವರಾಗಿದ್ದ ಕಾಲದಲ್ಲಿ ಈ ಯೋಜನೆಗೆ ಅನುದಾನ ಬಿಡುಗಡೆಯಾಗಿತ್ತು. ಇದೀಗ ಈ ಯೋಜನೆ ಮರು ಅನುಷ್ಠಾನಕ್ಕೆ ಬರುವ ಮಾಹಿತಿ ಇದ್ದು ಶೀಘ್ರದಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ರೈಲು ಮಾರ್ಗವನ್ನು ಜಾರಿಗೊಳಿಸಲು ಅಧಿಕೃತವಾಗಿ ಮನವಿ ಸಲ್ಲಿಸುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವಿಕಾಸ್ ಬಲಿಜ ಸಂಘದ ಮುಖಂಡರಾದ ವೆಂಕಟರಾಯಪ್ಪ ಯುವ ಕಾಂಗ್ರೆಸ್ ಅಧ್ಯಕ್ಷ ಅಂಬರೀಶ್ ಹಂಪಸಂದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್ ಶ್ರೀನಿವಾಸ್ ವೆಂಕಟೇಶಪ್ಪ ಸೀತಾರಾಮ್ ಸಂತೋಷ್ ಮಧು ಇನ್ನಿತರೆ ಮುಖಂಡರು ಹಾಜರಿದ್ದರು.






