ಬೆಂಗಳೂರು : ಮೇ 24 ; ಚಂದ್ರಲೇಔಟ್‌ನಲ್ಲಿರುವ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಂಸ್ಥೆಯ ಪದಾಧಿಕಾರಿಗಳ ಸಭೆ ಯಶಸ್ವಿಯಾಗಿ ನಡೆಯಿತು. ಈ ಸಭೆಯಲ್ಲಿ ನಾಗವೇಣಿ ಸುಂಕದ ಅವರನ್ನು ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಲಾಯಿತು.
ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿಎಂ ಗಣೇಶ್ ಗೌಡ ಅವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು. ಸಮಾಜ ಸೇವೆ ಹಾಗೂ ಮಹಿಳಾ ಸಂಘಟನೆ ಕ್ಷೇತ್ರದಲ್ಲಿ ನಾಗವೇಣಿ ಸುಂಕದ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಹಲವು ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದು, ನೂತನವಾಗಿ ನೇಮಕಗೊಂಡ ನಾಗವೇಣಿ ಸುಂಕದ ಅವರಿಗೆ ಶುಭಾಶಯ ಕೋರಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಇನ್ನಷ್ಟು ಕಾರ್ಯ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಲಾಯಿತು.






