ಗುಡಿಬಂಡೆ ಜ 22 ರಂದು ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ತಾಲೂಕು ಪಂಚಾಯಿತಿ ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ಇತರೆ ಇಲಾಖೆಗಳು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆ ಡಿ ಡಿ ಪಿ ಐ ಅಧಿಕಾರಿಗಳಾದ ರಮೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಸಂಘದ ಅಧ್ಯಕ್ಷ ಟಿ ಸಿ ಅಶ್ವತ್ ರೆಡ್ಡಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು . ಸಂಪನ್ಮೂಲ ವ್ಯಕ್ತಿಯಾಗಿ ಗುಡಿಬಂಡೆ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ಉಪನಿರೀಕ್ಷಕರಾದ ರಮೇಶ್ ರವರು ಹೆಲ್ಮೆಟ್ ಕಡ್ಡಾಯ ಮತ್ತು ರಸ್ತೆ ನಿಯಮಗಳನ್ನು ಪಾಲಿಸಿ ಎಂದು ಮಾಹಿತಿ ನೀಡಿದರು ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ನಾಗಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ ಕುಮಾರಿ ಇತರೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಹ ಶಿಕ್ಷಕರು ದೈಹಿಕ ಶಿಕ್ಷಕರು ನ್ಯಾಯಾಲಯದ ಸಿಬ್ಬಂದಿ ಪೊಲೀಸ್ ಇಲಾಖೆ ಸಿಬ್ಬಂದಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.






