ಅನಂತ ಫೌಂಡೇಶನ್ ಹಾಗೂ ಬಿಬಿಎಂಪಿ ಸಹಯೋಗಕ್ಕೆ
ಸಾರ್ವಜನಿಕರ ಮೆಚ್ಚುಗೆ
ಬೆಂಗಳೂರು,ಮೇ23 : ವಾರ್ಡ್ ನಂ.35ರಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಎಸ್‌ಸಿ/ಎಸ್‌ಟಿ ಅನುದಾನದಲ್ಲಿ ಹೊಸ ಬೋರ್‌ವೆಲ್ ನಿರ್ಮಾಣ ಮಾಡಲಾಗಿದ್ದು, ಸುಮಾರು 35ರಿಂದ 50 ಮನೆಗಳಿಗೆ ಕೊಳವೆ ಸಂಪರ್ಕ ಕಲ್ಪಿಸಲಾಗಿದೆ.
ಈ ಕಾರ್ಯಕ್ರಮವು ಅನಂತ ಫೌಂಡೇಶನ್ ಸಂಸ್ಥಾಪಕರಾದ ಚನ್ನಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಹೊಸ ಬೋರ್‌ವೆಲ್ ಉದ್ಘಾಟನೆ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಬಿಬಿಎಂಪಿ ಮತ್ತು ಅನಂತ ಫೌಂಡೇಶನ್‌ಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜನನಾಯಕ ಡಾ. ಅಶ್ವತ್ ನಾರಾಯಣ್ ಅವರು ಮಾತನಾಡಿ, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಗಳು ಇನ್ನಷ್ಟು ವೇಗವಾಗಿ ನಡೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಗ್ರಾಮಸ್ಥರು ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.






