ಗುಡಿಬಂಡೆ ಮೇ 31ರಂದು ಪಟ್ಟಣದ ಮುಖ್ಯ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದರ್ಶದಂತೆ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ತಾಲೂಕು ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ಗುಡಿಬಂಡೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಗಡಿ ಮತ್ತು ಟೀ ಅಂಗಡಿ ಮುಂಗ್ಗಟ್ಟುಗಳಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಮಂಜುನಾಥ್ ಪ್ಯಾನಲ್ ವಕೀಲರಾದ ಜೆ ವಿ ನರೇಂದ್ರ ಆರೋಗ್ಯ ನಿರೀಕ್ಷಕರಾದ ಗಂಗಾಧರ್ ರಹಮತ್ ನ್ಯಾಯಾಲಯದ ಸಿಬ್ಬಂದಿ ಸುರೇಶ್ ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು






